ಭಾವಪೂರ್ಣ ಶ್ರದ್ಧಾಂಜಲಿ
-
ಮುದ್ದೇಬಿಹಾಳ: ಪತ್ರಕರ್ತ, ನ್ಯಾಯವಾದಿ ಚೇತನ ಶಿವಶಿಂಪಿ ಅವರ ತಂದೆ
ಮಹಾದೇವಪ್ಪ ಗುರುಬಸಪ್ಪ ಶಿವಶಿಂಪಿ (64) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಸೇರಿ ಅಪಾರ ಬಂಧು ಬಳಗ ಇದೆ. ಮೃತರ ಅಂತ್ಯಕ್ರಿಯೆ ಗುರುವಾರ ಮದ್ಯಾಹ್ನ ಇಲ್ಲಿನ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ನಡೆಯಲಿದೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಾಸಕ ಸಿ.ಎಸ್.ನಾಡಗೌಡ, ಮಾಜಿ ಶಾಸಕ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಡಿ.ಬಿ.ವಡವಡಗಿ, ಸಂಘದ ತಾಲೂಕು ಅಧ್ಯಕ್ಷ ಮುತ್ತು ವಡವಡಗಿ, ಪದಾಧಿಕಾರಿಗಳು, ಸದಸ್ಯರು, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸಗ.ಮಾಲಗತ್ತಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.