ಪಟ್ಟಣದಲ್ಲಿ ನಾಳೆ ಅಗಷ್ಟ 10 ಭಾನುವಾರ ದಂದು ಪಟ್ಟದ ಓಂ ಶಾಂತಿ ಹತ್ತಿರ ಇರುವ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ನೂತನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವುದು. ಅದಕ್ಕೂ ಮೊದಲು ಮುದ್ದೇಬಿಹಾಳ ನಗರಕ್ಕೆ ಬರಮಾಡಿ ಕೋಳ್ಳುವುದು. ಮುಂಜಾನೆ 10 ಗಂಟೆಗೆ ಆಲಮಟ್ಟಿ ರಸ್ತೆಯಲ್ಲಿರುವ ಪಲ್ಲವಿ ಸ್ಟೀಲ್ ಅಂಗಡಿಯಿಂದ ಬಸವೇಶ್ವರ ಸರ್ಕಲ್ ಮಾರ್ಗವಾಗಿ ಕಂಚಿನ ಮೂರ್ತಿಯನ್ನು ಭವ್ಯ ಮೆರವಣಿಗೆಯ ಮುಖಾಂತರ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗುವುದು. ಮೆರವಣಿಗೆಯಲ್ಲಿ ತಾಲೂಕಿನ ಎಲ್ಲ ದೇಶಾಭಿಮಾನಿಗಳು ಹಾಗೂ ಯುವಕರು, ಮಹಿಳೆಯರು, ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಶೋಭೆ ತರಬೇಕೆಂದು ಮುದ್ದೇಬಿಹಾಳ ತಾಲ್ಲೂಕಿನ ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಮದರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
MUDDEBIHAL ಮುದ್ದೇಬಿಹಾಳ ಪಟ್ಟಣಕ್ಕೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ! ಅಭಿಮಾನಿಗಳಲ್ಲಿ ಸಂತಸ
By -
August 09, 2025
0
Tags: