Bangalore ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ

Bhima Samskruthi
By -
0
ಬೆಂಗಳೂರು(Bengaloru): ಹಣಕಾಸಿನ ಸಮಸ್ಯೆಯಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮಲ್ಲೇಶ್ವರಂ ಮಂಡಲದ ಬಿಜೆಪಿ ಕಾರ್ಯಕರ್ತನಾಗಿದ್ದ ವೆಂಕಟೇಶ್ ಎಂಬಾತ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮೃತದೇಹ ಪತ್ತೆಯಾಗಿದೆ.

ಕಳೆದ ಎರಡು ದಿನಗಳ ಹಿಂದೆ ವೆಂಕಟೇಶ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ವೈಯಾಲಿಕಾವಲ್ ನಲ್ಲಿರುವ ಅವರ ಟೂರ್ ಅಂಡ್ ಟ್ರಾವಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
Tags:

Post a Comment

0Comments

Post a Comment (0)