ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲೂಕು ಕವಡಿಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸಾಮಾಜಿಕ ಲೆಕ್ಕ ಪರಿಶೋಧನಾ ತಂಡ ಪರಿಶೀಲಿಸಿತು. ಈ ಸಂದರ್ಭದಲ್ಲಿ **ಸಾಮಾಜಿಕ ಲೆಕ್ಕ ಪರಿಶೋಧನೆಯ ಕಾರ್ಯಕ್ರಮದ ವ್ಯವಸ್ಥಾಪಕ ಚಿದಾನಂದ ಕೋಳಾರಿ** ಮಾತನಾಡಿ,
> “ಕೃಷಿ ಇಲಾಖೆ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸ್ಥಳ ಪರಿಶೀಲನೆ ಮಾಡಲಾಗಿದೆ. 15ನೇ ಹಣಕಾಸು ಆಯೋಗದ ಯೋಜನೆಗಳಡಿ ಕೈಗೊಂಡಿರುವ ಕಾಮಗಾರಿಗಳೂ ಉತ್ತಮ ರೀತಿಯಲ್ಲಿ ಅನುಷ್ಠಾನಗೊಂಡಿವೆ,” ಎಂದು ಹೇಳಿದರು.
ಅವರು ಮುಂದುವರೆದು,
> “2025-26ನೇ ಸಾಲಿನ **ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ** ಹಾಗೂ **15ನೇ ಹಣಕಾಸು ಆಯೋಗದ ಯೋಜನೆಗಳ** ಸಾಮಾಜಿಕ ಲೆಕ್ಕ ಪರಿಶೋಧನೆಯ ವರದಿಯನ್ನು ಗ್ರಾಮಸಭೆಯಲ್ಲಿ ಮಂಡಿಸಲಾಗಿದೆ. ಕಾಮಗಾರಿಗಳ ಬಗ್ಗೆ ಯಾವುದೇ ಆಕ್ಷೇಪಣೆ ಅಥವಾ ಅಸಮಾಧಾನ ಇದ್ದರೆ, ಜನರು ಅದನ್ನು ಲೆಕ್ಕ ಪರಿಶೋಧನಾ ತಂಡಕ್ಕೆ ತಿಳಿಸಬಹುದು. ಅದರ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದರು.
ಕವಡಿಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ **ಕೃಷಿ ಹೊಂಡ, ಬದು ನಿರ್ಮಾಣ, ದನದ ಕೊಟ್ಟಿಗೆ, ಕುರಿಶೆಡ್ ನಿರ್ಮಾಣ, ರಸ್ತೆ ಸುಧಾರಣೆ** ಮೊದಲಾದ ಕಾಮಗಾರಿಗಳು ಪೂರ್ಣಗೊಂಡಿವೆ. “ಈ ಕೆಲಸಗಳು ಮುಂದಿನ ಐದು ವರ್ಷಗಳವರೆಗೆ ಶಾಶ್ವತವಾಗಿದ್ದರೆ, ಸರ್ಕಾರ ನೀಡಿದ ಅನುದಾನ ಫಲಪ್ರದವಾಗಿ ಬಳಕೆಯಾಗುತ್ತದೆ,” ಎಂದು ಚಿದಾನಂದ ಕೋಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ **ಸುಜಾತ ರಾಠೋಡ** ಕಾಮಗಾರಿ ವರದಿ ಮಂಡಿಸಿದರು.
ಕಾರ್ಯಕ್ರಮದಲ್ಲಿ **ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೃಷಿ ಇಲಾಖೆ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಊರಿನ ಮುಖಂಡರು ಹಾಗೂ ರೈತರು** ಉಪಸ್ಥಿತರಿದ್ದರು.
— ✍️ *ವರದಿ: ಮುತ್ತು (ಭೀಮಣ್ಣ) ಸಿದ್ದರಾಮಪ್ಪ ಪೂಜಾರಿ, ಮುದ್ದೇಬಿಹಾಳ ತಾಲೂಕು*