ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು
ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನರಾಗಿದ್ದಾರೆ.
ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.