**ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯೂಟ್ಯೂಬ್ ಸ್ಟಾರ್ ‘ಮ್ಯೂಸಿಕ್ ಮೈಲಾರಿ’ ವಿರುದ್ಧ ಪ್ರಕರಣ ದಾಖಲು**
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯೂಟ್ಯೂಬ್ ಸ್ಟಾರ್ ಹಾಗೂ ಗಾಯಕ ‘ಮ್ಯೂಸಿಕ್ ಮೈಲಾರಿ’ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.
ಗ್ರಾಮದ ಹನುಮಂತ ದೇವರ ಓಕುಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಭಾಗವಹಿಸಿದ್ದಳು ಎಂದು ತಿಳಿದುಬಂದಿದೆ. ಕಾರ್ಯಕ್ರಮದ ಸಂದರ್ಭದಲ್ಲೇ ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
ಬಾಲಕಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಷಯ ಸಂಬಂಧ ತನಿಖೆ ಆರಂಭಿಸಿದ್ದಾರೆ. ಆರೋಪ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆರೋಪಿತನ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
-