ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಭೇಟಿ : ಪರಿಶೀಲನೆ
ವಿಜಯಪುರ, ಡಿ.17 (ಕರ್ನಾಟಕ ವಾರ್ತೆ):
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಖಾನೆಯಲ್ಲಿ ಕಬ್ಬಿನ ತೂಕ, ಸಕ್ಕರೆ ಇಳುವರಿ ಸೇರಿದಂತೆ ವಿವಿಧ ಪ್ರಕ್ರಿಯೆಗಳ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿ ಮಾಡಬೇಕು ಹಾಗೂ ರೈತರಿಂದ ಯಾವುದೇ ದೂರುಗಳು ಬಾರದಂತೆ ಎಚ್ಚರ ವಹಿಸುವಂತೆ ಕಾರ್ಖಾನೆ ಆಡಳಿತಕ್ಕೆ ಸೂಚಿಸಿದರು.
ಕಾರ್ಖಾನೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ ಅವರು, ಕಾರ್ಮಿಕರು ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ನಿಯಮಾನುಸಾರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಮುದ್ದೇಬಿಹಾಳ ತಹಶೀಲ್ದಾರ ಹಾಗೂ ಪರಿಸರ ಅಧಿಕಾರಿ ವಿವೇಕ್ ಅವರು ಉಪಸ್ಥಿತರಿದ್ದರು.